Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಭೀಕರ ಗುಂಡಿನ ದಾಳಿ!

webdunia
ಶನಿವಾರ, 20 ಆಗಸ್ಟ್ 2022 (12:48 IST)
ಮೊಗಾಡಿಶು : ಮುಂಬೈನ ತಾಜ್ ಹೋಟೆಲ್ ಅನ್ನು ಉಗ್ರರು ವಶಕ್ಕೆ ಪಡೆದು ಹತ್ಯಾಕಾಂಡ ನಡೆಸಿದ್ದ ಮಾದರಿಯಲ್ಲೇ ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಗುಂಡಿನ ದಾಳಿ ಹಾಗೂ ಬಾಂಬ್ ಸ್ಫೋಟ ನಡೆದಿದೆ.

ಅಲ್ಖೈದಾ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಲ್-ಶಬಾಬ್ ಸಂಘಟನೆಯ ಉಗ್ರರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, 8 ಮಂದಿ ನಾಗಕರಿಕರು ಬಲಿಯಾಗಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. 

ಅಲ್-ಶಬಾಬ್ ಭಯೋತ್ಪಾದಕ ಗುಂಪಿನ ಉಗ್ರರು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ, ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದ ಹಲವಾರು ಸಾವು-ನೋವುಗಳು ವರದಿಯಾಗಿವೆ. ಹೋಟೆಲ್ ಒಳಗೆ ಸ್ಫೋಟದ ಸದ್ದು ಕೂಡ ಕೇಳಿಬಂದಿದೆ. ದಾಳಿಯಲ್ಲಿ 8 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.

 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಗೆ ರೈಲ್ವೆ ಸೇತುವೆ ಕುಸಿತ!