Select Your Language

Notifications

webdunia
webdunia
webdunia
webdunia

ಭೀಕರ ದುರಂತ : ಬಹುಮಹಡಿ ಕಟ್ಟಡ ಸ್ಫೋಟದಲ್ಲಿ 14 ಮಂದಿ ಬಲಿ!

ಭೀಕರ ದುರಂತ : ಬಹುಮಹಡಿ ಕಟ್ಟಡ ಸ್ಫೋಟದಲ್ಲಿ  14 ಮಂದಿ ಬಲಿ!
ಢಾಕಾ , ಶುಕ್ರವಾರ, 10 ಮಾರ್ಚ್ 2023 (10:38 IST)
ಢಾಕಾ : 7 ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ 14 ಮಂದಿ ದಾರುಣ ಸಾವಿಗೀಡಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ನಡೆದಿದೆ.
 
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. 11 ಅಗ್ನಿಶಾಮಕ ಸೇವೆಗಳ ತುರ್ತು ಘಟಕಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟ ಸಂಭವಿಸಿದ ಸ್ಥಳದಿಂದ ಸಮೀಪದ ಕಟ್ಟಡಗಳಿಗೂ ಹಾನಿಯಾಗಿದೆ. ರಸ್ತೆಯಲ್ಲಿ ನಿಂತಿದ್ದ ಬಸ್ಗಳೂ ಸಾಕಷ್ಟು ಹಾನಿಯಾಗಿದೆ. ಕಟ್ಟಡದ ನೆಲ ಮಳಿಗೆಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್ನಲ್ಲಿ ಕಿಡಿಗೇಡಿಗಳ ಬಂಧನ