Publish Date: Sun, 12 Mar 2023 (12:55 IST)
Updated Date: Sun, 12 Mar 2023 (12:32 IST)
ನವದೆಹಲಿ : ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಭಾರತದಲ್ಲಿ ಉಗ್ರಗಾಮಿ ದಾಳಿಯ ಸಾಧ್ಯತೆಯೂ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ.
ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಆಧರಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ. ಪಾಕಿಸ್ತಾನವು ಭಾರತ ವಿರೋಧಿ ಉಗ್ರಗಾಮಿ ಮತ್ತು ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಸುದೀರ್ಘ ಇತಿಹಾಸವನ್ನು ಹೊಂದಿದೆ.
ಭಾರತ ಸರ್ಕಾರ ಕಾಶ್ಮೀರದ ಮೇಲೆ ಹಿಡಿತ ಹೆಚ್ಚಿಸುತ್ತಿದ್ದು ಇದು ಪಾಕ್ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣದಿಂದ ಭಾರತದ ವಿರೋಧಿ ಉಗ್ರಗಾಮಿ ಗುಂಪುಗಳು ಕಾಶ್ಮೀರದಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದ್ದು, ಬೇರೆ ಭಾಗಗಳಲ್ಲೂ ದಾಳಿ ನಡೆಯುವ ಸಂಭವಗಳಿದೆ ಎಂದು ಎಚ್ಚರಿಸಿದೆ.