Select Your Language

Notifications

webdunia
webdunia
webdunia
webdunia

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

ನವದಿಲ್ಲಿ
ನವದಿಲ್ಲಿ , ಬುಧವಾರ, 16 ಮೇ 2018 (07:16 IST)
ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ಹೆಚ್ಚು ಸ್ಥಾನ ಗಳಿಸಿರುವುದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ ಅವರು,’ ಕಾಂಗ್ರೆಸ್ ನ ಭ್ರಷ್ಟಾಚಾರವನ್ನು, ಒಡೆದು ಆಳುವ ರಾಜಕೀಯವನ್ನು ಕರ್ನಾಟಕದ ಜನ ತಿರಸ್ಕರಿಸಿದ್ದಾರೆ ಎಂಬುದನ್ನು ಫಲಿತಾಂಶ ತೋರಿಸಿಕೊಟ್ಟಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

 

ಬಿಜೆಪಿ ಬಹುಮತ ಪಡೆಯದ ಹಿನ್ನಲೆಯಲ್ಲಿ ತಂತ್ರ ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂಬುದಾಗಿ ಕೂಡ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣ ತಿಳಿಸಿದ ನಟ ಜಗ್ಗೇಶ್