Select Your Language

Notifications

webdunia
webdunia
webdunia
Monday, 7 April 2025
webdunia

12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಒಡಿಶಾ
ಒಡಿಶಾ , ಮಂಗಳವಾರ, 22 ಜನವರಿ 2019 (08:58 IST)
ಒಡಿಶಾ : ದುಷ್ಕರ್ಮಿಗಳು 12 ವರ್ಷದ ಬಾಲಕಿಯನ್ನು ಅಪಹರಿಸಿ  ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಬಾಲಕಿಯ ತಂದೆ ಒಂದು ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಹೀಗಾಗಿ ಅಪ್ಪನ ಅಂಗಡಿಗೆ ಬಂದಿದ್ದ ಬಾಲಕಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಸಿವಾಗುತ್ತಿದೆ ಊಟ ಹಾಕು ಅಂತ ಅಳುತ್ತಿದ್ದಳು. ಆದರೆ ಕೆಲ ಹೊತ್ತಿನ ಬಳಿಕ ಬಾಲಕಿ ಶವ ನಗ್ನವಾಗಿ ದೇವಸ್ಥಾನದ ಸಮೀಪವಿರುವ ಪೊದೆಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಚೂರಿಯಿಂದ ಇರಿದ ಗಾಯಗಳಿವೆ.

 

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಬಂದ ಪೊಲೀಸರು ಬಾಲಕಿಯ ಶವ ನೋಡಿ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ರೇಪ್ ವಿಚಾರ ಮನೆಯವರಿಗೆ ತಿಳಿಸುತ್ತಾಳೆ ಎಂಬ ಭಯದಿಂದ ಕಾಮುಕರು ಬಾಲಕಿ ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರಾವಾನಿಸಲಾಗಿದ್ದು ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ, ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ವ್ಯಕ್ತಿಗೆ ಆಮೇಲೆ ಆಗಿದ್ದೇನು ಗೊತ್ತಾ?