ಅರುಣಾಚಲ ಪ್ರದೇಶ : ರಾಜ್ಯ ವಿಧಾನ ಸಭಾ ಚುನಾವಣೆಗೆ ಸೀಟು ದೊರೆಯದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ 15 ನಾಯಕರು ಅಸಮಾಧಾನಗೊಂಡು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿಯ ಇಬ್ಬರು ಸಚಿವರು 12 ಶಾಸಕರು ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಮಾ.19 ರಂದು ಸೇರ್ಪಡೆಗೊಂಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಗೃಹ ಸಚಿವ ಕುಮಾರ್ ವಾಯ್, ಪ್ರವಾಸೋದ್ಯಮ ಸಚಿವ ಜರ್ಕರ್ ಗಮ್ಲಿನ್ ಸೇರಿದಂತೆ ಹಲವು ಹಾಲಿ ಸಚಿವರು ಹಾಗೂ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಭಿನ್ನಮತೀಯ ಶಾಸಕರು, ಸಚಿವರು ಎನ್ ಪಿಪಿ ಪ್ರಧಾನ ಕಾರ್ಯದರ್ಶಿ ಥಾಮಸ್ ಸಂಗ್ಮಾ ಅವರನ್ನು ಭೇಟಿ ಮಾಡಿ, ಪಕ್ಷ ಸೇರ್ಪಡೆಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.