Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

webdunia
ಶನಿವಾರ, 16 ಅಕ್ಟೋಬರ್ 2021 (10:30 IST)
ನವದೆಹಲಿ, ಅ. 16 : ಸತತ ಸೋಲು, ನಾಯಕರ ಅಸಹಕಾರ, ಅಸಮಾಧಾನಗಳ ನಡುವೆ ಒಂದೂ ವರ್ಷದ ಬಳಿಕ ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ  ನಡೆಯಲಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಎಐಸಿಸಿಯ ಅಧ್ಯಕ್ಷೀಯ ಚುನಾವಣೆ ಯಾವಾಗ ಆಗಬೇಕು? ಎಂಬ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಇಂದೇ ದಿನಾಂಕ ಪ್ರಕಟಗೊಳ್ಳಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಅಧ್ಯಕ್ಷ ಸ್ಥಾನ ಮಾತ್ರವಲ್ಲದೆ ಎಲ್ಲ ಪದಾಧಿಕಾರಿಗಳ ಹುದ್ದೆಯ ಆಯ್ಕೆಗೆ ಸಾಂಸ್ಥಿಕ ಚುನಾವಣೆ ನಡೆಸುವ ಬಗ್ಗೆ ಚರ್ಚೆ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ. ಕೂಡಲೇ ಪೂರ್ಣಾವಧಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನಾದರೂ ಆಯ್ಕೆ ಮಾಡಿ ಜೊತೆಗೆ ಪದಾಧಿಕಾರಿಗಳ ಹುದ್ದೆಯ ಆಯ್ಕೆಗೆ ಸಾಂಸ್ಥಿಕ ಚುನಾವಣೆ ನಡೆಸಿ ಎಂದು ಇತ್ತೀಚೆಗೆ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ 'ಜಿ- 23' ನಾಯಕರು  ಎಂಬ ಅಪಸ್ವರ ಎತ್ತಿತ್ತು. ಆದುದರಿಂದ 'ಜಿ- 23' ನಾಯಕರ ವಿಷಯದಲ್ಲಿ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕೂಡ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

'ರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ