ಜೈಪುರ : ಗುದದ್ವಾರದಲ್ಲಿ ಚಿನ್ನ ಸಾಗಿಸುತ್ತಿದ್ದ 30 ವರ್ಷದ ವ್ಯಕ್ತಿಯೊಬ್ಬನನ್ನು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
									
			
			 
 			
 
 			
					
			        							
								
																	
ಪಂಕಜ್ ಸಾದುವಾನಿ ಬಂಧಿತ ಆರೋಪಿಯಾಗಿದ್ದು, ಥಾಯ್ ಏರ್ ವೇಸ್ ನಲ್ಲಿ ಬಂದಿದ್ದ ಈತ ವಿಮಾನ ನಿಲ್ದಾಣದಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದನು. ಆತನ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.
									
										
								
																	
ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದು, ಒಂದು ಕೇಜಿ ತೂಕದ ಚಿನ್ನವನ್ನು ಗುದನಾಳದಲ್ಲಿ ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆತನನ್ನು ಬಂಧಿಸಿದ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.