Webdunia - Bharat's app for daily news and videos

Install App

ಆಕ್ರಮಣ ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು : ಮೋದಿ ಕರೆ

Webdunia
ಮಂಗಳವಾರ, 28 ಮಾರ್ಚ್ 2023 (14:00 IST)
ನವದೆಹಲಿ : ಬಿಜೆಪಿಯ ಪುನರಾವರ್ತಿತ ವಿಜಯಗಳಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳು ನಮ್ಮ ಮೇಲೆ ಹೆಚ್ಚು ಆಕ್ರಮಣ ಮಾಡುತ್ತವೆ. ನಾವು ಗೆದ್ದಷ್ಟು ಆಕ್ರಮಣವು ಕಠಿಣವಾಗಿರಲಿದೆ. ಇದನ್ನು ಎದುರಿಸಲು ನಾವು ಪ್ರಬಲವಾಗಿ ಸಿದ್ಧವಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.
 
ಎರಡನೇ ಅವಧಿಯ ಬಜೆಟ್ ಅಧಿವೇಶನದ ಭಾಗವಾಗಿ ಮಂಗಳವಾರ ಸಂಸತ್ ಭವನದಲ್ಲಿ ಸಂಸದೀಯ ಸಭೆ ನಡೆಸಿದ ಅವರು ಸಂಸದರೊಂದಿಗೆ ಚರ್ಚೆ ನಡೆಸಿದರು. ಗುಜರಾತ್ನಲ್ಲಿ ಐತಿಹಾಸಿಕ ಗೆಲುವು ಸಿಕ್ಕಿದೆ. ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಿದೆ. ಇದರಿಂದ ಅಸಮಾಧಾನಗೊಂಡಿರುವ ವಿಪಕ್ಷಗಳು ನಮ್ಮ ಮೇಲೆ ಹೆಚ್ಚಿನ ಆಕ್ರಮಣ ಮಾಡಬಹುದು ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಬಜೆಟ್ ಅಧಿವೇಶನ ಮುಂದೂಡಿಕೆ, ರಾಹುಲ್ ಗಾಂಧಿಯ ಅನರ್ಹತೆ ಪ್ರಶ್ನಿಸಿ ಪ್ರತಿಭಟನೆ ಮತ್ತು ಅದಾನಿ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸುತ್ತಿರುವ ಪ್ರಕ್ಷುಬ್ಧ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಸಂಸತ್ತಿನ ಎರಡೂ ಸದನಗಳು ಅಸ್ತವ್ಯಸ್ತಗೊಂಡಿವೆ ಮತ್ತು ಬಜೆಟ್ ವಿಧಿವಿಧಾನಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ವ್ಯವಹಾರಗಳು ನಡೆದಿಲ್ಲ, ನಾವು ನಮ್ಮ ಕೆಲಸಗಳನ್ನು ಜನರವರೆಗೂ ತಲುಪಿಸಬೇಕು ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments