Select Your Language

Notifications

webdunia
webdunia
webdunia
webdunia

ಜಮ್ಮುಕಾಶ್ಮೀರದಲ್ಲಿ ಪ್ರಕ್ಷುಬ್ದ ವಾತಾವರಣದ ಹಿನ್ನಲೆ; ಎಲ್ಲಾ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ

ಜಮ್ಮುಕಾಶ್ಮೀರದಲ್ಲಿ ಪ್ರಕ್ಷುಬ್ದ ವಾತಾವರಣದ ಹಿನ್ನಲೆ; ಎಲ್ಲಾ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ , ಸೋಮವಾರ, 5 ಆಗಸ್ಟ್ 2019 (10:29 IST)
ನವದೆಹಲಿ : ಜಮ್ಮುಕಾಶ್ಮೀರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.




ಈಗಾಗಲೇ ಕಣಿವೆ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ,  ಶ್ರೀನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಹಾಗೇ ಮುಂಜಾಗ್ರತ ಕ್ರಮವಾಗಿ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಈಗಾಗಲೇ ಜಮ್ಮು-ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಹಿಂಪಡೆಯಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಅಲ್ಲದೇ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣ ಹಾಗೂ ಭಯೋತ್ಪಾದಕರ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ  ಹೈ ಅಲರ್ಟ್ ಘೋಷಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರದ ಕಣಿವೆ ರಾಜ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ