Publish Date: Tue, 21 Feb 2023 (14:55 IST)
Updated Date: Tue, 21 Feb 2023 (14:57 IST)
ಹೈದರಾಬಾದ್ : ಇತ್ತೀಚೆಗೆ ಬೀದಿ ನಾಯಿಗಳ ಉಪಟಳ ಹೆಚ್ಚಾಗುತ್ತಿದ್ದು, ಜನರ ಮೇಲೆ ದಾಳಿ ಮಾಡುವಂತಹ ಘಟನೆಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ.
ಇದೀಗ 4ರ ಪುಟ್ಟ ಬಾಲಕನೊಬ್ಬ ಬೀದಿ ನಾಯಿಗಳ ಅಟ್ಟಹಾಸಕ್ಕೆ ಬಲಿಯಾಗಿರುವ ಮನಕಲಕುವ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ.
ವರದಿಗಳ ಪ್ರಕಾರ ಮೃತ ಬಾಲಕನ ತಂದೆ ಗಂಗಾಧರ್ ಘಟನೆ ನಡೆದ ವಸತಿ ಪ್ರದೇಶದ ಆವರಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಾಲಕ ಅದೇ ವಸತಿ ಪ್ರದೇಶದಲ್ಲಿ ಆಟವಾಡುತ್ತಾ ಸಾಗುತ್ತಿದ್ದಾಗ ಏಕಾಏಕಿ ಕೆಲ ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿವೆ.