ಪಾಟ್ನಾ : ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯರು ಸೇತುವೆ ಕುಸಿದು ಬೀಳುತ್ತಿರುವ ವೀಡಿಯೋಗಳನ್ನು ಸೆರೆಹಿಡಿದ್ದು, ಇವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸೇತುವೆಯನ್ನು ಖಗಾರಿಯಾ, ಆಗುವನಿ ಮತ್ತು ಸುಲ್ತಾನ್ಗಂಜ್ ನಡುವೆ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿತ್ತು. ಏಪ್ರಿಲ್ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. 2 ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎಂದು ವರದಿಗಳು ತಿಳಿಸಿವೆ.