Publish Date: Wed, 14 Sep 2022 (13:39 IST)
Updated Date: Wed, 14 Sep 2022 (13:41 IST)
ಭೋಪಾಲ್ : ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಭೋಪಾಲ್ನ ಶಾಹಪುರ ಪ್ರದೇಶದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮ ಕಾರ್ಯಾಚರಣೆ ನಡೆದಿದೆ. ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿದ್ದರಿಂದ ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಳೆದ ಗುರುವಾರ ಭೋಪಾಲ್ನಲ್ಲಿ ಈ ಘಟನೆ ನಡೆದಾಗ ಬಸ್ ಚಾಲಕನ ಜೊತೆಗೆ ವಾಹನದೊಳಗೆ ಮಹಿಳಾ ಅಟೆಂಡರ್ ಕೂಡ ಇದ್ದರು ಎಂದು ಬಾಲಕಿ ಪೋಷಕರು ತಿಳಿಸಿದ್ದು, ಅಟೆಂಡರ್ ಕೂಡ ಬಂಧನಕ್ಕೊಳಗಾಗಿದ್ದಾರೆ.
ಐಪಿಸಿ ಸೆಕ್ಷನ್ 376-ಎಬಿ (12 ವರ್ಷದೊಳಗಿನ ಬಾಲಕಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೋಪಾಲ್ನ ಪ್ರಮುಖ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಗು ಬಸ್ನಲ್ಲಿ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.