Select Your Language

Notifications

webdunia
webdunia
webdunia
webdunia

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

CJI BR Gavai

Sampriya

ನವದೆಹಲಿ , ಮಂಗಳವಾರ, 7 ಅಕ್ಟೋಬರ್ 2025 (11:39 IST)
Photo Credit X
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಅವರು ಮೊದಲ ಪ್ರತಿಕ್ರಿಯೆ ಭಾರೀ ಅಚ್ಚರಿ ಮೂಡಿಸಿದೆ. 

ನನ್ನ ನಡವಳಿಕೆಗೆ ಯಾವುದೇ ವಿಷಾದಿಸುವುದಿಲ್ಲ ಎಂದು ಹೇಳಿದ್ದಾರೆ. 

ನನಗೆ ನೋವಾಯಿತು. ನಾನು ಮದ್ಯ ಸೇವಿಸಿಲ್ಲ, ಇದು ಅವರ ಕ್ರಿಯೆಗೆ ನನ್ನ ಪ್ರತಿಕ್ರಿಯೆಯಾಗಿದೆ. ನಾನು ಭಯಪಡುವುದಿಲ್ಲ. ಏನಾಯಿತು ಎಂದು ನಾನು ವಿಷಾದಿಸುವುದಿಲ್ಲ ಎಂದಿದ್ದಾರೆ.

 ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ತಿಳಿಸಿದರು.

ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‌ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ