Select Your Language

Notifications

webdunia
webdunia
webdunia
webdunia

ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿದ ಕೇಂದ್ರ ಸರ್ಕಾರ

ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು  ಅವಕಾಶ ನೀಡಿದ ಕೇಂದ್ರ ಸರ್ಕಾರ
ನವದೆಹಲಿ , ಶನಿವಾರ, 14 ಸೆಪ್ಟಂಬರ್ 2019 (11:57 IST)
ನವದೆಹಲಿ : ಕೊನೆಗೂ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.




ಮಾತೃಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಈ ಮೊದಲು ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಬಳಿಕ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿತ್ತು.ಇದಕ್ಕೆ ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಯಲು ಅವಕಾಶ ನೀಡಿದೆ.


ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡುವುದಾಗಿ ಹೇಳಿದ್ದು, ಇಂಗ್ಲಿಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳು ನಡೆಯಲಿವೆ ಎಂದುತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗುತ್ತಿಗೆ ನೌಕರರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ