Select Your Language

Notifications

webdunia
webdunia
webdunia
webdunia

ರೈತರ ಸಂಕಷ್ಟಕ್ಕಿರುವ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ವಿಫಲ

pm modi
chandighad , ಶುಕ್ರವಾರ, 3 ನವೆಂಬರ್ 2023 (13:17 IST)
ನಗೌರಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮದ್ಯ ಮುಕ್ತ ಗ್ರಾಮದ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ , ರೈತರ ಸಂಕಷ್ಟಕ್ಕಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಇದರಿಂದ ಸರಣಿ ಆತ್ಮಹತ್ಯೆಗಳು ನಡೆಯುತ್ತಿವೆ ಎಂದು ದೂರಿದ್ದಾರೆ.
 
ದೇಶದ ಗಂಭೀರ ಸಮಸ್ಯೆಗಳನ್ನು ಹಾಗೂ ಭ್ರಷ್ಟಾಚಾರ ಹಾವಳಿ ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು  ಹೇಳಿದ್ದಾರೆ.
 
ಭ್ರಷ್ಟಾಚಾರ ನಿಯಂತ್ರಣ ಮಾಡಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಇನ್ನಷ್ಟು ಹೆಚ್ಚಾಗಿದ್ದು, ಸಮಾಜವನ್ನು ಹಾಳುಗೆಡುವುತ್ತಿದೆ. ಈ ಸಮಸ್ಯೆಗಳ ಬಗ್ಗೆ ಮೋದಿ ಅವರಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ, ಒಂದು ಪತ್ರಕ್ಕೂ ಉತ್ತರಿಸುವ ಸೌಜನ್ಯ ತೋರಿಸಿಲ್ಲ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ದೈವತ್ವದಿಂದ ಮಾತ್ರ ಲಭ್ಯ: ಬಿಜೆಪಿ