Select Your Language

Notifications

webdunia
webdunia
webdunia
webdunia

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

Fast Tag Based Annual Pass

Sampriya

ನವದೆಹಲಿ , ಬುಧವಾರ, 18 ಜೂನ್ 2025 (15:15 IST)
Photo Credit X
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಿರಿಕಿರಿಯಿಲ್ಲದೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 

ಈ ಕುರಿತು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ. ವಾರ್ಷಿಕ 3 ಸಾವಿರ ರೂಪಾಯಿಗೆ ಟೋಲ್‌ ಪಾಸ್‌  ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. 

ನಿತಿನ್‌ ಗಡ್ಕರಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಫಾಸ್ಟ್‌ ಟ್ಯಾಗ್‌ ಆಧರಿತ ವಾರ್ಷಿಕ ಪಾಸ್‌ ಬಗ್ಗೆ ವಿವರವನ್ನು ಹಂಚಿಕೊಂಡಿದ್ದಾರೆ.  ₹ 3 ಸಾವಿರ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದ್ದು ಆಗಸ್ಟ್ 15, 2025 ರಿಂದ ಜಾರಿಗೆ ಬರುತ್ತದೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ. 

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆಯಾಗಲಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ