Select Your Language

Notifications

webdunia
webdunia
webdunia
webdunia

ಮಂಡಸೌರ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಕೇಂದ್ರದಿಂದ ಘರ್ಷಣೆ ನಿಗ್ರಹ ಪಡೆ ರವಾನೆ

ಮಂಡಸೌರ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಕೇಂದ್ರದಿಂದ ಘರ್ಷಣೆ ನಿಗ್ರಹ ಪಡೆ ರವಾನೆ
ಭೋಪಾಲ್ , ಗುರುವಾರ, 8 ಜೂನ್ 2017 (09:43 IST)
ಭೋಪಾಲ್: ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಾಂತಿ ಸ್ಥಾಪಿಸುವ ಸಲುವಾಗಿ ಕೇಂದ್ರ ಸರ್ಕಾರ  1,100 ಘರ್ಷಣೆ ನಿಗ್ರಹ ಪಡೆಗಳನ್ನು ರವಾನಿಸಿದೆ.
 
ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದು, ಹಲವರು  ಗಾಯಗೊಂಡಿದ್ದಾರೆ. ಇದರಿಂದ ಮಧ್ಯಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.  ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ರಸ್ತೆಯಲ್ಲಿದ್ದ ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಈ ಹಿನ್ನಲೆಯಲ್ಲಿ ಶಾಂತಿ ಮರುಸ್ಥಾಪಿಸುವ ಸಲುವಾಗಿ ಕೇಂದ್ರ ಸರ್ಕಾರ 600 ಆಕ್ಷನ್ ಫೋರ್ಸ್, 1,100 ಘರ್ಷಣೆ ನಿಗ್ರಹ ವಿಶೇಷ ಪಡೆಗಳನ್ನು ರವಾನಿಸಿದೆ. ಈ ಮಧ್ಯೆ ರೈಅತರ ಪ್ರತಿಭಟನೆ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

Share this Story:

Follow Webdunia kannada

ಮುಂದಿನ ಸುದ್ದಿ

2000 ರೂ. ಖೋಟಾನೋಟು ಚಲಾವಣೆ ಮಾಡುತ್ತಿದ್ದಾಗ ಸಹನಟಿ ಬಂಧನ