ಸಿಎಂ ಕುರ್ಚಿ ಕದನ ಅಂತ್ಯ

Webdunia
ಗುರುವಾರ, 18 ಮೇ 2023 (06:22 IST)
ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ  ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ.  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ.

ಬುಧವಾರ ದಿನಪೂರ್ತಿ ಡಿಕೆಶಿ ಜೊತೆ ಮಾತುಕತೆ ನಡೆಸಿದರೂ ಯಾವುದೇ ಕಾರಣಕ್ಕೂ ತಮ್ಮ ಬೇಡಿಕೆಯಿಂದ ಹಿಂದಕ್ಕೆ ಸರಿದಿರಲಿಲ್ಲ. ತಡರಾತ್ರಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ದೂರವಾಣಿ ಮೂಲಕವೇ ಡಿಕೆಶಿಯನ್ನು ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು ಕುರ್ಚಿ ಕಾದಾಟಕ್ಕೆ ಬ್ರೇಕ್ ಬಿದ್ದಿದೆ.

ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದರೆ ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಲಿದ್ದಾರೆ. ಡಿಕೆ ಶಿವಕುಮಾರ್  ಡಿಸಿಎಂ, ಎರಡು ಪ್ರಬಲ ಖಾತೆಯನ್ನು ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments