Select Your Language

Notifications

webdunia
webdunia
webdunia
webdunia

ಬೆಂಬಲ ಹಿಂಪಡೆಯುವುದಾಗಿ ಕಾಂಗ್ರೆಸ್ ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ ಬೆದರಿಕೆ

ಬೆಂಬಲ ಹಿಂಪಡೆಯುವುದಾಗಿ ಕಾಂಗ್ರೆಸ್ ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ  ಬೆದರಿಕೆ
ನವದೆಹಲಿ , ಮಂಗಳವಾರ, 1 ಜನವರಿ 2019 (09:48 IST)
ನವದೆಹಲಿ : ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಬೆದರಿಕೆಯೊಡ್ಡಿದೆ.


ಎಸ್ಸಿ ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು, ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 10 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ದಲಿತ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು.


ಈ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಮಾಯಾವತಿಯ ಪಕ್ಷ ಇದೀಗ ಬೆದರಿಕೆಯೊಡ್ಡಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್; ಎಲ್‍ ಪಿಜಿ ಸಿಲಿಂಡರ್ ದರ ಇಳಿಕೆ