Select Your Language

Notifications

webdunia
webdunia
webdunia
webdunia

ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಎದುರಾಗಿದೆ ಅಪಾಯ- ಅಖಿಲೇಶ

ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಎದುರಾಗಿದೆ ಅಪಾಯ- ಅಖಿಲೇಶ
ಲಕ್ನೋ , ಗುರುವಾರ, 25 ಜನವರಿ 2018 (20:41 IST)

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಆಡಳಿತ ವ್ಯವಸ್ಥೆಯಲ್ಲಿ ಅಪರಾಧಗಳು ಏರಿಕೆಯಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯದ ಮುನ್ಸೂಚನೆ ಎದುರಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಹೇಳಿದ್ದಾರೆ.

ಮೀರತನಲ್ಲಿ ಹಾಡುಹಗಲು ನಡೆದ ಎರಡು ಕೊಲೆಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧದ ಧ್ವನಿಗಳನ್ನು ಅಡಗಿಸುವ ಮೂಲಕ ಯೋಗಿ ಆದಿತ್ಯನಾಥ್ ಅವರು ಪ್ರಜಾಪ್ರಭುತ್ವದ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಅವರು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯ 56 ಇಂಚಿನ ಎದೆ ಮುಸ್ಲಿಮರ ಮುಂದೆ ಮಾತ್ರ- ಒವೈಸಿ