Select Your Language

Notifications

webdunia
webdunia
webdunia
webdunia

ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು!

ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು!
ನವದೆಹಲಿ , ಶನಿವಾರ, 11 ಫೆಬ್ರವರಿ 2023 (13:17 IST)
ನವದೆಹಲಿ : ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಆಚರಿಸುವ ಬದಲು ಗೋವುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಕರೆ ನೀಡಿತ್ತು.
 
ಆದರೆ ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಈ ನಿರ್ಧಾರವನ್ನು ಮಂಡಳಿ ಹಿಂಪಡೆದಿದೆ. ಫೆಬ್ರವರಿ 14ರಂದು ವಿಶ್ವದೆಲ್ಲೆಡೆ ಪ್ರೇಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನವನ್ನು ಭಾರತದಲ್ಲಿ ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ಪ್ರಾಣಿ ಕಲ್ಯಾಣ ಮಂಡಳಿ ಕೆಲ ದಿನಗಳ ಹಿಂದೆ ಕರೆ ನೀಡಿತ್ತು. ಹಸುಗಳನ್ನು ಅಪ್ಪಿಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆ, ಆದ್ದರಿಂದ ಪ್ರೇಮಿಗಳ ದಿನದಂದು ಹಸುಗಳನ್ನು ಅಪ್ಪಿಕೊಳ್ಳುವ ದಿನವನ್ನಾಗಿ ಆಚರಿಸಲು ತಿಳಿಸಿತ್ತು.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಪ್ರಧಾನಿಗೆ ಪವಿತ್ರ ಹಸು ಎಂದು ಹೇಳಿ ಕಿಡಿಕಾರಿತ್ತು. 

Share this Story:

Follow Webdunia kannada

ಮುಂದಿನ ಸುದ್ದಿ

ಶಿವಕುಮಾರ್ : ಅಕ್ರಮ ಆಸ್ತಿ ಗಳಿಕೆ ಪ್ರಕರಣ