ಲಕ್ನೋ : ಕುಡಿದ ಮತ್ತಿನಲ್ಲಿದ್ದ ವೈದ್ಯ ನೀಡಿದ ಚಿಕಿತ್ಸೆಯಿಂದಾಗಿ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಗಂಟಲಿನಲ್ಲಿ ಜೋಳ ಸಿಲುಕಿದೆ ಎಂದು ಬಾಲಕಿಯನ್ನು ಸಿರೌಲಿ ಗೌಸ್ಪುರ ಪ್ರದೇಶದ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ರಾತ್ರಿ ಕರ್ತವ್ಯದ ವೇಳೆ ಡಾ.ಧರ್ಮೇಂದ್ರ ಗುಪ್ತಾ ಅವರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ.
ವೈದ್ಯ ಒಂದು ಗಂಟೆಯ ನಂತರ ಅಮಲೇರಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದು, ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಪರಿಣಾಮವಾಗಿ ಮಗು ಸಾವಿಗೀಡಾಗಿದೆ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.
ಸಿರೌಲಿ ಗೌಸ್ಪುರ್ನ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ. ನೀಲಂ ಗುಪ್ತಾ ಅವರು ಧರ್ಮೇಂದ್ರ ಗುಪ್ತಾ ಅವರನ್ನು ಕರ್ತವ್ಯದಿಂದ ತೆಗೆದುಹಾಕಿದ್ದಾರೆ.