Webdunia - Bharat's app for daily news and videos

Install App

ಮತ್ತಿನಲ್ಲಿ ಚಿಕಿತ್ಸೆ ನೀಡಿದ ವೈದ್ಯ, ಮಗು ಸಾವು!

Webdunia
ಬುಧವಾರ, 28 ಸೆಪ್ಟಂಬರ್ 2022 (06:42 IST)
ಲಕ್ನೋ : ಕುಡಿದ ಮತ್ತಿನಲ್ಲಿದ್ದ ವೈದ್ಯ ನೀಡಿದ ಚಿಕಿತ್ಸೆಯಿಂದಾಗಿ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ  ಬಾರಾಬಂಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಗಂಟಲಿನಲ್ಲಿ ಜೋಳ ಸಿಲುಕಿದೆ ಎಂದು ಬಾಲಕಿಯನ್ನು ಸಿರೌಲಿ ಗೌಸ್ಪುರ ಪ್ರದೇಶದ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ರಾತ್ರಿ ಕರ್ತವ್ಯದ ವೇಳೆ ಡಾ.ಧರ್ಮೇಂದ್ರ ಗುಪ್ತಾ ಅವರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ.

ವೈದ್ಯ ಒಂದು ಗಂಟೆಯ ನಂತರ ಅಮಲೇರಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದು, ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಪರಿಣಾಮವಾಗಿ ಮಗು ಸಾವಿಗೀಡಾಗಿದೆ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಸಿರೌಲಿ ಗೌಸ್ಪುರ್ನ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ. ನೀಲಂ ಗುಪ್ತಾ ಅವರು ಧರ್ಮೇಂದ್ರ ಗುಪ್ತಾ ಅವರನ್ನು ಕರ್ತವ್ಯದಿಂದ ತೆಗೆದುಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments