17 ವರ್ಷದ ಅಪ್ರಾಪ್ತ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಆದಕಾರಣ ಆಕೆ ಗರ್ಭ ಧರಿಸಿದ್ದಾಳೆ. ಅಲ್ಲಿನ ಮಹಿಳಾ ಸಂಘಟನೆ ಸದಸ್ಯೆಯೊಬ್ಬಳಿಗೆ ಬಾಲಕಿ 7 ತಿಂಗಳ ಗರ್ಭಿಣಿ ಎಂದು ತಿಳಿದು ಅನುಮಾನಗೊಂಡ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಮಗಳ ರಕ್ಷಣೆ ಮಾಡಬೇಕಾಗಿದ್ದ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಆಗ ಬಾಲಕಿ 7 ತಿಂಗಳ ಗರ್ಭಿಣಿ ಎಂಬುದು ತಿಳಿದಿದ್ದು, ತಂದೆ ಹಾಗೂ ಆತನ ಸ್ನೇಹಿತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ವಿಚಾರ ಬಾಲಕಿ ಬಾಯ್ಬಿಟ್ಟಿದ್ದಾಳೆ. ಇದೀಗ ಬಾಲಕಿಯನ್ನು ಆಶ್ರಯ ಮನೆಯಲ್ಲಿರಿಸಿದ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಶುರುಮಾಡಿದ್ದಾರೆ.