Publish Date: Wed, 19 Dec 2018 (14:13 IST)
Updated Date: Wed, 19 Dec 2018 (14:31 IST)
ಆಗ್ರಾ : ನಡುರಸ್ತೆಯಲ್ಲಿ ಹತ್ತನೇ ತರಗತಿಯ ಬಾಲಕಿಯ ಮೇಲೆ ದುಷ್ಕರ್ಮಿಗಳಿಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅತ್ಯಮಾನುಷ ಘಟನೆ ವರದಿಯಾಗಿದೆ.
ಬಾಲಕಿ ಶಾಲೆಗೆ ಹೋಗುತ್ತಿರುವಾಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಆಕೆಯನ್ನು ರಸ್ತೆಯಲ್ಲಿ ತಡೆದು ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬಾಲಕಿಗೆ ಶೇ.70ರಷ್ಟು ಸುಟ್ಟಗಾಯಗಳಾಗಿದ್ದು ಆಕೆಯನ್ನು ದಿಲ್ಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇಸು ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಆರೋಪಿಗಳು ಬಾಲಕಿಗೆ ಬೆಂಕಿ ಹಚ್ಚಿದ್ದೇಕೆ ಎಂಬುದು ಇನ್ನು ತಿಳಿದುಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.