Publish Date: Thu, 08 Nov 2018 (06:49 IST)
Updated Date: Thu, 08 Nov 2018 (06:50 IST)
ಗಾಂಧಿನಗರ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು 37 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಗುಜರಾತಿನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ.
ಕೊಲೆಯಾದ ಬಾಲಕಿ ಕೊಡಿಯಾರ್ ಪಟ್ಟಣದ ಕಾರ್ಪೋರೇಟ್ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದು, ಸೋಮವಾರ ಜುನಿ ಬಜಾರಿನಲ್ಲಿ ಪುಸ್ತಕ ತೆಗೆದುಕೊಂಡು ಮನೆಗೆ ಬರುತ್ತಿರುವುದಾಗಿ ಹೇಳಿದ ಬಾಲಕಿ ಎಷ್ಟೇ ಹೊತ್ತಾದರೂ ಮನೆಗೆ ವಾಪಾಸ್ಸಾಗಿರದ ಹಿನ್ನಲೆಯಲ್ಲಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಾಲಕಿಯ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಮಂಗಳವಾರ ಬೆಳಗ್ಗೆ ಗಿರ್-ಸೋಮನಾಥ್ ಜಿಲ್ಲೆಯ ಕೊಡಿಯಾರ್ ಬಳಿಯ ಉನಾ ಹೆದ್ದಾರಿಯ ಸಮೀಪ ಬಾಲಕಿಯ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ದೇಹಕ್ಕೆ 37 ಬಾರಿ ಚೂರಿಯಿಂದ ಇರಿದು ಕೊಂದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಸ್ನೇಹಿತರೇ ಈ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮರಣೋತ್ತರ ವರದಿಯ ನಂತರ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಎನ್ನುವ ಮಾಹಿತಿ ಖಚಿತವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.