Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ , 37 ಬಾರಿ ಚಾಕುವಿನಿಂದ ಇರಿದು ಕೊಂದ ಕಾಮುಕರು

Webdunia
ಗುರುವಾರ, 8 ನವೆಂಬರ್ 2018 (06:49 IST)
ಗಾಂಧಿನಗರ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು 37 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಗುಜರಾತಿನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ.


ಕೊಲೆಯಾದ ಬಾಲಕಿ ಕೊಡಿಯಾರ್ ಪಟ್ಟಣದ ಕಾರ್ಪೋರೇಟ್ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದು,  ಸೋಮವಾರ ಜುನಿ ಬಜಾರಿನಲ್ಲಿ ಪುಸ್ತಕ ತೆಗೆದುಕೊಂಡು ಮನೆಗೆ ಬರುತ್ತಿರುವುದಾಗಿ ಹೇಳಿದ ಬಾಲಕಿ ಎಷ್ಟೇ ಹೊತ್ತಾದರೂ ಮನೆಗೆ ವಾಪಾಸ್ಸಾಗಿರದ ಹಿನ್ನಲೆಯಲ್ಲಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಬಾಲಕಿಯ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಮಂಗಳವಾರ ಬೆಳಗ್ಗೆ ಗಿರ್-ಸೋಮನಾಥ್ ಜಿಲ್ಲೆಯ ಕೊಡಿಯಾರ್ ಬಳಿಯ ಉನಾ ಹೆದ್ದಾರಿಯ ಸಮೀಪ ಬಾಲಕಿಯ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ದೇಹಕ್ಕೆ 37 ಬಾರಿ ಚೂರಿಯಿಂದ ಇರಿದು ಕೊಂದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಸ್ನೇಹಿತರೇ ಈ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮರಣೋತ್ತರ ವರದಿಯ ನಂತರ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಎನ್ನುವ ಮಾಹಿತಿ ಖಚಿತವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments