Webdunia - Bharat's app for daily news and videos

Install App

4 ರ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗದ್ದೆಯಲ್ಲಿ ಎಸೆದ !

Webdunia
ಗುರುವಾರ, 3 ನವೆಂಬರ್ 2022 (10:09 IST)
ಭೋಪಾಲ್ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ  ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರ ಗದ್ದೆಯ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಇಂದೋರ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ಸಂಬಂಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಳು. ನಂತರ ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.

ತನಿಖೆ ವೇಳೆ, ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವಕನ ಮೇಲೆ ಅನುಮಾನ ಹೊಂದಿದ್ದರು. ಈತ ಭಾನುವಾರ ರಾತ್ರಿ ಬಾಲಕಿಯ ಕುಟುಂಬಸ್ಥರಿಗೆ ಬೆಡ್ ಶೀಟ್ ಖರೀದಿಸುವಂತೆ ಒತ್ತಾಯಿಸಿದ್ದನು.
ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ವೇಳೆ ಆರೋಪಿ ಬಾಲಕಿಯನ್ನು ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಈ ಮಾಹಿತಿಯನ್ನು ಆಧರಿಸಿ, ಪರಿಶೀಲನೆ ನಡೆಸಿದ ಪೊಲೀಸರಿಗೆ ನಾಪತ್ತೆಯಾಗಿದ್ದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರಂಭದಲ್ಲಿ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ನಂತರ ಇಂದೋರ್ಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿವೇಕ್ ಸಿಂಗ್ ತಿಳಿಸಿದ್ದಾರೆ. 

ಬಾಲಕಿ ಮಲಗಿದ್ದ ವೇಳೆ ಆಕೆಯನ್ನು ಅಪಹರಿಸಿ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಪೊದೆಯೊಂದಕ್ಕೆ ಎಸೆದು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಮುಂದಿನ ಸುದ್ದಿ
Show comments