Publish Date: Tue, 18 Sep 2018 (07:23 IST)
Updated Date: Tue, 18 Sep 2018 (07:26 IST)
ಒಡಿಶಾ : ಅಪರಿಚಿತ ಯುವಕರ ಗುಂಪೊಂದು ಹುಡುಗಿಯೊಬ್ಬಳನ್ನು ಕಿಡ್ನಾಪ್ ಮಾಡಿ ಮನೆಯಲ್ಲಿ ಕೂಡಿ ಹಾಕಿ ನಿರಂತರ 28 ದಿನಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಬಳಿಕ ಸಂತ್ರಸ್ತೆಯನ್ನು ನದಿಗೆ ಎಸೆದಿರುವ ಘಟನೆ ಒಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಆಗಸ್ಟ್ 20ರಂದು ಮಧುಬಾನ್ ಬಜಾರ್ ಗೆ ಹೋಗುತ್ತಿದ್ದಾಗ ಅಪರಿಚಿತ ಯುವಕರ ಗುಂಪೊಂದು ಬಂದು ಯುವತಿಯೊಬ್ಬಳನ್ನು ಅಪಹರಿಸಿ, ಬಳಿಕ ನಿರ್ಜನ ಪ್ರದೇಶದಲ್ಲಿದ್ದ ಮನೆಯೊಂದರಲ್ಲಿ ಕೂಡಿ ಹಾಕಿ ನಿರಂತರವಾಗಿ 28 ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ನಂತರ ಆಕೆಯನ್ನು ಖರಾಸ್ರೋಟಾ ನದಿಗೆ ಬಿಸಾಕಿದ್ದಾರೆ.
ಆದರೆ ಸಂತ್ರಸ್ತೆ ಹೇಗೋ ಕಷ್ಟಪಟ್ಟು ಈಜಿಕೊಂಡು ಜಿಲ್ಲೆಯ ಕೌಖಿಯಾ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ರೌಟ್ಪುರ್ ಗ್ರಾಮದ ತೀರಕ್ಕೆ ಬಂದಿದ್ದಾಳೆ. ಬಳಿಕ ನಡೆದ ಘಟನೆಯ ಬಗ್ಗೆ ಅಲ್ಲಿನ ಗ್ರಾಮಸ್ಥರಿಗೆ ತಿಳಿಸಿದ್ದಾಳೆ. ನಂತರ ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ತಮ್ಮ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದ ಪೋಷಕರಿಗೆ ತಮ್ಮ ಮಗಳನ್ನು ಒಪ್ಪಿಸಿದ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.