ಹುಡುಗಿಯ ಮೇಲೆ ನಿರಂತರ 28 ದಿನಗಳ ಕಾಲ ಗ್ಯಾಂಗ್ ರೇಪ್ ಮಾಡಿ ನಂತರ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:23 IST)
ಒಡಿಶಾ : ಅಪರಿಚಿತ ಯುವಕರ ಗುಂಪೊಂದು ಹುಡುಗಿಯೊಬ್ಬಳನ್ನು ಕಿಡ್ನಾಪ್ ಮಾಡಿ ಮನೆಯಲ್ಲಿ ಕೂಡಿ ಹಾಕಿ ನಿರಂತರ 28 ದಿನಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಬಳಿಕ ಸಂತ್ರಸ್ತೆಯನ್ನು ನದಿಗೆ ಎಸೆದಿರುವ ಘಟನೆ ಒಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.


ಆಗಸ್ಟ್ 20ರಂದು ಮಧುಬಾನ್ ಬಜಾರ್ ಗೆ ಹೋಗುತ್ತಿದ್ದಾಗ ಅಪರಿಚಿತ ಯುವಕರ ಗುಂಪೊಂದು ಬಂದು ಯುವತಿಯೊಬ್ಬಳನ್ನು  ಅಪಹರಿಸಿ, ಬಳಿಕ ನಿರ್ಜನ ಪ್ರದೇಶದಲ್ಲಿದ್ದ ಮನೆಯೊಂದರಲ್ಲಿ ಕೂಡಿ ಹಾಕಿ ನಿರಂತರವಾಗಿ 28 ದಿನಗಳ ಕಾಲ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ನಂತರ ಆಕೆಯನ್ನು ಖರಾಸ್ರೋಟಾ ನದಿಗೆ ಬಿಸಾಕಿದ್ದಾರೆ.


ಆದರೆ ಸಂತ್ರಸ್ತೆ ಹೇಗೋ ಕಷ್ಟಪಟ್ಟು ಈಜಿಕೊಂಡು ಜಿಲ್ಲೆಯ ಕೌಖಿಯಾ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ರೌಟ್ಪುರ್ ಗ್ರಾಮದ ತೀರಕ್ಕೆ ಬಂದಿದ್ದಾಳೆ. ಬಳಿಕ ನಡೆದ ಘಟನೆಯ ಬಗ್ಗೆ ಅಲ್ಲಿನ ಗ್ರಾಮಸ್ಥರಿಗೆ ತಿಳಿಸಿದ್ದಾಳೆ. ನಂತರ ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಈಗಾಗಲೇ ತಮ್ಮ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದ ಪೋಷಕರಿಗೆ ತಮ್ಮ ಮಗಳನ್ನು ಒಪ್ಪಿಸಿದ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments