Select Your Language

Notifications

webdunia
webdunia
webdunia
webdunia

ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ !

ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ !
ಗುವಾಹಟಿ , ಭಾನುವಾರ, 28 ಆಗಸ್ಟ್ 2022 (10:18 IST)
ಗುವಾಹಟಿ : ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ಹೆಚ್ಚು ಅಕ್ರಮಗಳು ನಡೆಯುತ್ತಿವೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆ ಸಂದರ್ಭದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಗಟ್ಟಲು ಅಸ್ಸಾಂ ಸರ್ಕಾರ ಕೆಲವು ನಿಯಮಗಳನ್ನು ತಂದಿದ್ದು, ಈ ನಿಯಮಾನುಸಾರ ಪರೀಕ್ಷಾ ಕೇಂದ್ರದ ಸುತ್ತಲೂ 4 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಇಂದಿನಿಂದ ನಡೆಯುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 27,000 ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆಗೆ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದೇ ಇರಲಿ ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ