Select Your Language

Notifications

webdunia
webdunia
webdunia
webdunia

ಮದುವೆ ದಿನವೇ ವರ 2 ಬಾರಿ ನಾಪತ್ತೆ! ಮುಂದೇನಾಯ್ತು?

ಮದುವೆ ದಿನವೇ ವರ 2 ಬಾರಿ ನಾಪತ್ತೆ! ಮುಂದೇನಾಯ್ತು?
ಪಾಟ್ನಾ , ಸೋಮವಾರ, 28 ಮಾರ್ಚ್ 2022 (08:02 IST)
ಪಾಟ್ನಾ : ಮದುವೆಯ ದಿನದಂದೇ ವರ ನಾಪತ್ತೆಯಾಗಿದ್ದು, ಎಷ್ಟೇ ಕಾದರೂ ವರ ಬಾರದಿದ್ದಕ್ಕೆ ವಧುವಿನ ಕಟುಂಬಸ್ಥರು ಪೊಲೀಸ್ ಠಾಣೆ ಮಟ್ಟಿಲು ಹತ್ತಿದ ಘಟನೆ ಬಿಹಾರದ ಧನ್ಬಾದ್ ಪ್ರದೇಶದಲ್ಲಿ ನಡೆದಿದೆ.

ಧನ್ಬಾದ್ನ ಭುಲಿ ನಿವಾಸಿ ರತ್ನೇಶ್ ಕುಮಾರ್ ವರ. ಇವರು ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆ ಸಮಯದಲ್ಲಿ ರತ್ನೇಶ್ ನಾಪತ್ತೆಯಾಗಿದ್ದು, ಎಷ್ಟು ಕಾದರೂ ಬಾರದೇ ಇದ್ದಾಗ ವಧುವಿನ ಕಡೆಯವರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ವಧುವಿನ ಸಂಬಂಧಿಕರು, ವರ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ನಂತರದಲ್ಲಿ ವರ ವಾಪಸ್ ಬಂದಿದ್ದಾನೆ. ತಡರಾತ್ರಿ ಮದುವೆ ಮಾಡಲಾಯಿತು.

ಕಳೆದ ವರ್ಷವೂ ಇದೇ ರೀತಿ ಆಗಿತ್ತು, ಮದುವೆಯ ದಿನಾಂಕ ನಿಗದಿಯಾಗಿತ್ತು. ಆದರೆ ವರ ರತ್ನೇಶ್ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ವಧುವಿನ ಕಡೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರ ನಡುವೆ ಒಪ್ಪಂದವಾಗಿತ್ತು ಎಂದು ವಧು ಕಡೆಯವರು ತಿಳಿಸಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು!