Select Your Language

Notifications

webdunia
webdunia
webdunia
webdunia

ಕೆಲಸ ಬಿಡಲು ನಿರಾಕರಿಸಿದ ಪತ್ನಿಯನ್ನು ಕ್ರೂರವಾಗಿ ಥಳಿಸಿದ ಪತಿ!

ಕೆಲಸ ಬಿಡಲು ನಿರಾಕರಿಸಿದ ಪತ್ನಿಯನ್ನು ಕ್ರೂರವಾಗಿ ಥಳಿಸಿದ ಪತಿ!
ತಿರುವನಂತಪುರಂ , ಗುರುವಾರ, 20 ಅಕ್ಟೋಬರ್ 2022 (10:59 IST)
ತಿರುವನಂತಪುರಂ : ಕೆಲಸ ಬಿಡಲು ನಿರಾಕರಿಸಿದ ಪತ್ನಿಯನ್ನು ಪತಿಯೇ ಕ್ರೂರವಾಗಿ ಥಳಿಸಿದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ತಿರುವನಂತಪುರಂ ಮೂಲದ ದಿಲೀಪ್ (27) ಬಂಧಿತ ವ್ಯಕ್ತಿ. ಈತನ ಪತ್ನಿ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ದಿಲೀಪ್ಗೆ ಆಕೆ ಅಲ್ಲಿ ಕೆಲಸ ಮಾಡುವುದು ಇಷ್ಟವಿರಲಿಲ್ಲ.

ಇದರಿಂದಾಗಿ ಆತ ಪತ್ನಿಗೆ ಕೆಲಸವನ್ನು ಬಿಡಲು ತಿಳಿಸಿದ್ದಾನೆ. ಆದರೆ ಆಕೆ ಒಪ್ಪದಿದ್ದಾಗ ಕ್ರೂರವಾಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ದಿಲೀಪ್ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ವೀಡಿಯೋದಲ್ಲಿ ದಿಲೀಪ್ ಪತ್ನಿ ಸಾಲ ತೀರಿಸಲು ಕೆಲಸ ಮಾಡುತ್ತಿದ್ದೇನೆ ಎಂದು ಹೇಳುತ್ತಾಳೆ. ಆದರೆ ದಿಲೀಪ್ ಅದನ್ನು ಅರ್ಥ ಮಾಡಿಕೊಳ್ಳದೆ ಪತ್ನಿಯನ್ನು ಕ್ರೂರವಾಗಿ ಥಳಿಸಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಪ್ರಥಮ ಭಾರಿಗೆ ಫೋನ್‌ಕಾಲ್ ಮೂಲಕ ವಿಚಾರಣೆ ನಡೆಸಿದ ಸುಪ್ರೀಂ!