ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಪತ್ನಿಯನ್ನೇ ಅತ್ಯಾಚಾರ!

Webdunia
ಗುರುವಾರ, 27 ಜುಲೈ 2023 (16:02 IST)
ಮುಂಬೈ : ಸಾಲ ತೆಗೆದುಕೊಂಡು ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಪತಿಯೆದುರೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಘಟನೆ ಈ ವರ್ಷ ಫೆಬ್ರವರಿಯಲ್ಲಿ ನಡೆದಿದೆ. ಆದರೆ ಈಗ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ವ್ಯಕ್ತಿಯೊಬ್ಬ 40,000 ರೂ. ಸಾಲ ಪಡೆದಿದ್ದು, ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಸಾಲ ನೀಡಿದಾತ ಆತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆರೋಪಿ ಮಹಿಳೆಯ ಪತಿಗೆ ಚಾಕು ತೋರಿಸಿ, ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯದ ವೀಡಿಯೋವನ್ನು ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

Karur Stampede: ಮೃತರ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರ ಘೋಷಿಸಿದ ವಿಜಯ್

ಮುಂದಿನ ಸುದ್ದಿ
Show comments