Select Your Language

Notifications

webdunia
webdunia
webdunia
webdunia

ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ! ಕಾರಣ ಕೇಳುದ್ರೆ ಶಾಕ್ ಆಗ್ತೀರಾ?

ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ! ಕಾರಣ ಕೇಳುದ್ರೆ ಶಾಕ್ ಆಗ್ತೀರಾ?
ಜೈಪುರ್ , ಶನಿವಾರ, 2 ಸೆಪ್ಟಂಬರ್ 2023 (09:45 IST)
ಜೈಪುರ್ : ಮಹಿಳೆಯೊಬ್ಬರಿಗೆ ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.

ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲಾ ಸಚಿವರಿಗೆ ಕಾರು ಭಾಗ್ಯ : ಇನ್ನೋವಾ ಹೈಕ್ರಾಸ್ ಹೈಬ್ರಿಡ್