ಮತ್ತಿನಲ್ಲಿ 12ನೇ ಪತ್ನಿಯನ್ನೇ ಮುಗಿಸಿದ ಪತಿ!

Webdunia
ಮಂಗಳವಾರ, 4 ಏಪ್ರಿಲ್ 2023 (15:07 IST)
ರಾಂಚಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ 12ನೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಅಚ್ಚರಿಯ ಘಟನೆಯೊಂದು ಜಾರ್ಖಂಡ್ ನಲ್ಲಿ ನಡೆದಿದೆ.
 
ಮೃತಳನ್ನು ಸಾವಿತ್ರಿ ದೇವಿ (40) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪತಿ ರಾಮಚಂದ್ರ ತುರಿ ಕೊಲೆ ಮಾಡಿದ್ದಾನೆ. ಪತಿ ಹಾಗೂ ಪತ್ನಿ ಇಬ್ಬರೂ ಕೋಣೆಯೊಳಗೆ ಕುಳಿತುಕೊಂಡು ಮದ್ಯಪಾನ ಮಾಡಿದ್ದಾರೆ. ಹೀಗೆ ಮಾತನಾಡುತ್ತಾ ಇಬ್ಬರ ಮಧ್ಯೆ ವಿಚಾರವೊಂದಕ್ಕೆ ವಾಗ್ವಾದ ನಡೆದಿದೆ. ಪತ್ನಿಯ ಮಾತಿನಿಂದ ರೊಚ್ಚಿಗೆದ್ದ ಪತಿ, ಅಲ್ಲೇ ಇದ್ದ ಕೋಲು ತೆಗೆದುಕೊಂಡು ಚೆನ್ನಾಗಿ ಥಳಿಸಿದ್ದಾನೆ. ಪರಿಣಾಮ ಸಾವಿತ್ರಿ ದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಇತ್ತ ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮೃತಳು ಆರೋಪಿಯ 12ನೇ ಪತ್ನಿಯಾಗಿದ್ದಾಳೆ.

ಇದಕ್ಕೂ ಮೊದಲು ಮದುವೆಯಾಗಿರುವ 11 ಮಂದಿ ಪತ್ನಿಯರು ಕೂಡ ಈತ ನೀಡುತ್ತಿದ್ದ ಮಾನಸಿಕ ಹಿಂಸೆಯಿಂದ ಬಿಟ್ಟು ಹೋಗಿದ್ದಾರೆ. ಆರೋಪಿಗೆ ಮೂವರು ಪುತ್ರರು ಹಾಗೂ ಓರ್ವ ಮಗಳಿದ್ದು, ಎಲ್ಲರೂ ಸಾವಿತ್ರಿ ದೇವಿ ಜೊತೆ ವಾಸವಾಗಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments