ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಪಾತಾಳಕ್ಕೆ ಕುಸಿದಿದೆ. ಮಂಗಳವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 13 ಪೈಸೆ ಕುಸಿದಿದೆ. ವಹಿವಾಟಿನ ಅಂತ್ಯಕ್ಕೆ ಪ್ರತೀ ಡಾಲರ್ ಮೌಲ್ಯ ₹85.65 ಆಗಿದೆ.
ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳ ಮುಂದುವರಿದಿದೆ. ಮತ್ತೊಂದೆಡೆ ಡಾಲರ್ ಮೌಲ್ಯ ಬಲಗೊಳ್ಳುತ್ತಿದೆ. ಇದರಿಂದ 2024ರಲ್ಲಿ ರೂಪಾಯಿ ಮೌಲ್ಯವು ಶೇ 3ರಷ್ಟು ಕುಸಿತ ಕಂಡಿದೆ.
ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಸೇರಿ ಹಲವು ದೇಶಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಡಾಲರ್ ಸೂಚ್ಯಂಕ ಏರಿಕೆಯ ಹಾದಿ ಹಿಡಿದಿದೆ.
10 ವರ್ಷದ ಅವಧಿಯ ಅಮೆರಿಕದ ಬಾಂಡ್‌ಗಳ ಗಳಿಕೆ ಹೆಚ್ಚಳವಾಗಿದೆ. ಅಲ್ಲದೆ, ಭಾರತದ ಆರ್ಥಿಕ ಬೆಳವಣಿಗೆ ದರ ಕುಂಠಿತವಾಗಿದೆ. ಇದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ