Select Your Language

Notifications

webdunia
webdunia
webdunia
webdunia

ಜ್ಞಾನವಾಪಿ ಸಮೀಕ್ಷೆ : ನ್ಯಾಯಾಧೀಶರಿಗೆ ಜೀವ ಬೆದರಿಕೆ

ಜ್ಞಾನವಾಪಿ ಸಮೀಕ್ಷೆ : ನ್ಯಾಯಾಧೀಶರಿಗೆ ಜೀವ ಬೆದರಿಕೆ
ಲಕ್ನೋ , ಬುಧವಾರ, 8 ಜೂನ್ 2022 (08:48 IST)
ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ.

ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶೃಂಗಾರ ಗೌರಿ ಹಾಗೂ ಇತರ ದೇವತೆಗಳ ಆರಾಧನೆಗೆ ಮಹಿಳೆಯರು ಹಕ್ಕು ಚಲಾಯಿಸಿದ ಪ್ರಕರಣದಲ್ಲಿ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿಕುಮಾರ್ ದಿವಾಕರ್ ಸಮೀಕ್ಷೆಯ ಆಯೋಗಕ್ಕೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಸಿವಿಲ್ ನ್ಯಾಯಾಧೀಶರಿಗೆ ಇಸ್ಲಾಮಿಕ್ ಅಘಾಜ್ ಎಂಬ ಸಂಘಟನೆಯಿಂದ ಬೆದರಿಕೆ ಪತ್ರ ಬಂದಿದೆ.

ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಿಂದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಈ ಹಿನ್ನೆಲೆಯಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜ್ಞಾನವ್ಯಾಪಿ ಮಸೀದಿಗೆ ಸಂಬಂಧಿಸಿ ಸಮೀಕ್ಷೆಯನ್ನು ಮಾಡಲು ಆಯೋಗವನ್ನು ರಚಿಸಲು ಆದೇಶಿಸಿದ್ದರು.

ಈ ಬೆನ್ನಲ್ಲೇ ಸಿವಿಲ್ ನ್ಯಾಯಾಧೀಶರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ವಾರಣಾಸಿಯ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. 

ವಾರಣಾಸಿಯ ಪೊಲೀಸ್ ಕಮಿಷನರ್ ಎ. ಸತೀಶ್ ಗಣೇಶ್ ಈ ಬಗ್ಗೆ ಮಾಹಿತಿ ನೀಡಿ, ನ್ಯಾಯಾಧೀಶರಿಗೆ ಬೆದರಿಕೆ ಪತ್ರಗಳು ಬಂದ ಹಿನ್ನೆಲಯಲ್ಲಿ, ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಉಪ ಆಯುಕ್ತರಿಗೆ ತಿಳಿಸಲಾಗಿದ್ದು, ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.

ವಾರಣಾಸಿಯ ಸಿವಿಲ್ ನ್ಯಾಯಾಧೀಶರು ಮತ್ತು ಲಕ್ನೋದಲ್ಲಿರುವ ಅವರ ತಾಯಿಯ ಭದ್ರತೆಯನ್ನು ಮೇ 13 ರಿಂದಲೇ ಭದ್ರತೆಯನ್ನು ನೀಡಲಾಗಿತ್ತು. ಇದೀಗ ಜಿಲ್ಲಾ ನ್ಯಾಯಾಧೀಶರಿಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ ಎಂದು ಹೇಳಿದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ಪೋಷಕರು!