Webdunia - Bharat's app for daily news and videos

Install App

ಒಂದೇ ದಿನ ಎರಡು ಬಾರಿ ವಿಧವಾ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

Webdunia
ಬುಧವಾರ, 23 ಜನವರಿ 2019 (06:15 IST)
ಮುಂಬೈ : ವಿಧವಾ ಮಹಿಳೆಯೊಬ್ಬಳು ಒಂದೇ ದಿನ ಎರಡು ಬಾರಿ ಗ್ಯಾಂಗ್ ರೇಪ್‍ಗೆ ಒಳಗಾದ ಘಟನೆ ಜನವರಿ 16ರಂದು ಮಧ್ಯರಾತ್ರಿ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.


ಸಂತ್ರಸ್ತ ಮಹಿಳೆ 15ರಂದು ಕಾರ್ಯಕ್ರಮವೊಂದನ್ನು ಮುಗಿಸಿ ಏಕಾಂಗಿಯಾಗಿ ರಾತ್ರಿ 11.30ಕ್ಕೆ ಮನೆಗೆ ಹಿಂತಿರುಗುತ್ತಿದ್ದಾಗ ಮೂವರು ಕಾಮುಕರು ಆಕೆಯನ್ನು ತಡೆದು ಯಾರೂ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಒಬ್ಬರ ನಂತರ ಒಬ್ಬರು ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ.


ಆ ನೋವಲ್ಲೇ ಮನೆಗೆ ಹಿಂತಿರುಗುತ್ತಿದ್ದ ಆಕೆಯನ್ನು ದಾರಿ ಮಧ್ಯದಲ್ಲಿ ಮತ್ತಿಬ್ಬರು ಅಡ್ಡಗಟ್ಟಿ ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಈ ಘಟನೆಯಲ್ಲಿ ಆಕೆಯ ತಲೆಗೆ ಗಾಯವಾಗಿದ್ದು, ಮರುದಿನ ಆಕೆ ಆಸ್ಪತ್ರೆಗೆ ಹೋಗಿ ವೈದ್ಯರ ಬಳಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ. ನಂತರ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments