ದಿವ್ಯಾಂಗ ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ಯುವಕನನ್ನು ಕೊಂದ ಸ್ಥಳೀಯರು

Webdunia
ಸೋಮವಾರ, 4 ಫೆಬ್ರವರಿ 2019 (06:30 IST)
ಭುವನೇಶ್ವರ : ಮನೆಯಲ್ಲಿ ಒಂಟಿಯಾಗಿದ್ದ ದಿವ್ಯಾಂಗ ಹುಡುಗಿಯನ್ನು ಅತ್ಯಾಚಾರ ಮಾಡಿದ್ದಕ್ಕೆ, ಸ್ಥಳೀಯರು ಸೇರಿ ಆರೋಪಿ ಯುವಕನನ್ನು ಥಳಿಸಿ ಕೊಂದಿರುವ ಘಟನೆ ಒಡಿಶಾದ ಕೆಯೊಂಝಾರ್ ನಲ್ಲಿ ನಡೆದಿದೆ.

ಸಂತ್ರಸ್ತೆಯ ಪೋಷಕರು ಜೀವನಕ್ಕಾಗಿ ಅರಣ್ಯದಲ್ಲಿ ಕಟ್ಟಿಗೆಯನ್ನು ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು. ಅದರಂತೆಯೇ ಒಂದು ದಿನ ತಮ್ಮ ಮಗಳನ್ನು ಮನೆಯಲ್ಲಿ ಬಿಟ್ಟು ಕಾಡಿಗೆ ಹೋಗಿದಾಗ ಯುವಕನೊಬ್ಬ ಯಾರು ಇಲ್ಲದಿರುವುದನ್ನು ಗಮನಿಸಿ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

 

ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ಮನೆಯವರಿಗೆ ಹಾಗೂ ಸ್ಥಳೀಯರಿಗೆ ತಿಳಿಸಿದ್ದ ಹಿನ್ನಲೆಯಲ್ಲಿ ಎಲ್ಲಾ ಸೇರಿ ಯುವಕನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಯುವಕನನ್ನು ಸ್ಥಳೀಯರಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆರೋಪಿ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಸದ್ಯಕ್ಕೆ ಬಮೇಬಾರಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಯುವಕನ ಮೇಲೆ ದಾಳಿ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments