Webdunia - Bharat's app for daily news and videos

Install App

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹೋರಾಡುತ್ತಿದೆ ಎಂದ ಸಚಿವ

Webdunia
ಮಂಗಳವಾರ, 29 ಸೆಪ್ಟಂಬರ್ 2020 (12:49 IST)
ಪ್ರಧಾನಿ ಮೋದಿ ಅವರು ಸಾಮಾನ್ಯ ಸಣ್ಣ ರೈತನಿಗೂ ಅನುಕೂಲ ಆಗುವಂತಹ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ.

ವಿನಾಕಾರಣ ಕಾಂಗ್ರೆಸ್, ಜೆಡಿಎಸ್ ವಿರೋಧಿಸುತ್ತಿವೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳುಬಿದ್ದಿರುವ 30-40 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಯಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು. ಅಲ್ಲದೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಕಾಯ್ದೆ ತಿದ್ದುಪಡಿ ಮಾಡಲಾಗಿದೆ’.

‘ಕಾಂಗ್ರೆಸ್ ನಾಯಕರೇ 79 ‘ಎ’ ಮತ್ತು ‘ಬಿ’ ಯನ್ನು ಕೈಬಿಡಬೇಕೆಂದು ವಿಧಾನಸಭೆಯಲ್ಲಿಯೇ ಹೇಳಿದ್ದರು. ಅದು ವಿಧಾನಸಭೆಯಲ್ಲಿ ದಾಖಲೆಯೂ ಆಗಿದೆ. ಆದರೆ ಈಗ ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ’ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಈಗ ಅದನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ’ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments