Webdunia - Bharat's app for daily news and videos

Install App

ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣಗೆ ಶಾಕ್‌ ಕೊಟ್ಟ ವಿದೇಶಾಂಗ ಸಚಿವಾಲಯ

sampriya
ಶುಕ್ರವಾರ, 24 ಮೇ 2024 (17:13 IST)
ನವದೆಹಲಿ: ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಪ್ರಕರಣದಲ್ಲಿ ಎಸ್‌ಐಟಿಗೆ ಬೇಕಾಗಿರುವ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಶೋಕಾಸ್‌ ನೋಟಿಸ್‌ ನೀಡಿ ಶಾಕ್‌ ಕೊಟ್ಟಿದೆ.

ನೋಟಿಸ್‌ ಅನ್ವಯ ವಿದೇಶಕ್ಕೆ‌ ತೆರಳಿದ ಬಗ್ಗೆ ಹಾಗೂ ವಾಪಾಸ್ ಬರುವ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಈ ಸಂಬಂಧ ೧೦ ದಿನಗಳ ಒಳಗೆ  ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿಯನ್ನು ನೀಡುವಂತೆ ಪ್ರಜ್ವಲ್‌ ರೇವಣ್ಣಗೆ ಸೂಚಿಸಲಾಗಿದೆ.

ಪೆನ್‌ಡ್ರೈವ್‌ ವಿಡಿಯೋ ವೈರಲ್‌ ಆಗುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ದೇಶ ಬಿಟ್ಟು ಜರ್ಮನಿಗೆ ಓಡಿ ಹೋಗಿದ್ದರು. ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು, ಅದು ಯಾವುದಕ್ಕೂ ಕ್ಯಾರೇ ಅನ್ನದೇ ಅಲ್ಲಿ ಕೂತಿದ್ದಾರೆ. ಇನ್ನೂ ತನಿಖೆಗೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ಇದರ ಬೆನ್ನಲ್ಲೇ ಇದೀಗ ವಿದೇಶಾಂಗ ಸಚಿವಾಲಯ ಪ್ರಜ್ವಲ್​ಗೆ ಶೋಕಾಸ್ ನೋಟಿಸ್ ನೀಡಿದೆ. ಈ ನೋಟಿಸ್ ಮೂಲಕ ಪಾಸ್​ಪೋರ್ಟ್​ ರದ್ದುಗೊಳಿಸುವ ಬಗ್ಗೆ ಪ್ರಜ್ವಲ್​ಗೆ ಉತ್ತರ ಕೇಳಿದೆ. ಇದರಿಂದ ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments