Webdunia - Bharat's app for daily news and videos

Install App

ಮಹಿಳೆಗೆ ಬೆಂಕಿ ಹಚ್ಚಿ ಚಿತ್ರೀಕರಿಸಿದ ದುರುಳರು!

Webdunia
ಸೋಮವಾರ, 4 ಜುಲೈ 2022 (15:31 IST)
ಮಧ್ಯಪ್ರದೇಶ : ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಲಾಗಿದೆ.

ತನ್ನನ್ನು ರಕ್ಷಿಸುವಂತೆ ಮಹಿಳೆ ಸಹಾಯಕ್ಕಾಗಿ ಕಿರುಚುತ್ತಿದ್ದರು, ಗ್ರಾಮಸ್ಥರ ಗುಂಪೊಂದು  ಕ್ಯಾಮರಾದಲ್ಲಿ ಘಟನೆಯನ್ನು ಚಿತ್ರೀಕರಿಸಿದೆ. ಮಹಿಳೆ ಹೊತ್ತಿ ಉರಿಯುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬುಟಕಟ್ಟು ಮಹಿಳೆಯನ್ನು 38 ವರ್ಷದ ರಾಂಪ್ಯಾರಿ ಬಾಯಿ ಎಂದು ಗುರುತಿಸಲಾಗಿದ್ದು, ಮಹಿಳೆ ದುರ್ಬಲ ಬುಡಕಟ್ಟು ಗುಂಪಿಗೆ ಸೇರಿದ್ದಾಳೆ. ಆಕೆ ತೀವ್ರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬುಡಕಟ್ಟು ಮಹಿಳೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆಗೆ ಶೇಕಡಾ 80 ರಷ್ಟು ಸುಟ್ಟ ಗಾಯಗಳಾಗಿವೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಭೋಪಾಲ್, ಗುನಾದಿಂದ 200 ಕಿಮೀ ದೂರದಲ್ಲಿರುವ ಬಮೋರಿ ಪೊಲೀಸ್ ಠಾಣೆ ವ್ಯಾಪ್ತಿಯ ಧನೋರಿಯಾ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಶ್ರೀವಾಸ್ತವ ತಿಳಿಸಿದ್ದಾರೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments