Webdunia - Bharat's app for daily news and videos

Install App

ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಕೊಂದ ತಾಯಿ!

Webdunia
ಭಾನುವಾರ, 26 ಮಾರ್ಚ್ 2023 (08:07 IST)
ಲಕ್ನೋ : ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಮಕ್ಕಳನ್ನು ಕೊಲೆಗೈದ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಈ ಘಟನೆ ಬುಧವಾರ ನಡೆದಿದ್ದು, ಮಹಿಳೆ ಹಾಗೂ ಅಲ್ಲಿನ ಸ್ಥಳೀಯ ಕೌನ್ಸಿಲರ್ ಸೌದ್ ಪರಸ್ಪರ ಪ್ರೀತಿಸುತ್ತಿದ್ದರು.
 
ಹೀಗಾಗಿ ಮಹಿಳೆ ಪ್ರೇಮಿಯ ಜೊತೆ ಸೇರಿ ತನ್ನ 10 ವರ್ಷದ ಮಗ ಹಾಗೂ 6 ವರ್ಷದ ಮಗಳನ್ನು ಕೊಂದು ಬಳಿಕ ಶವಗಳನ್ನು ಕಾಲುವೆಗೆ ಎಸೆದಿದ್ದಾರೆ. ಅಲ್ಲದೇ ಮಕ್ಕಳ ಹತ್ಯೆಯಲ್ಲಿ ನೆರೆಮನೆಯವರೂ ಭಾಗಿಯಾಗಿದ್ದು, ಇಲ್ಲಿಯವರೆಗೆ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಗಳನ್ನು ತನ್ನ ಮನೆಯಲ್ಲಿ ಕೊಂದು, ಮಗನನ್ನು ಪಕ್ಕದ ಮನೆಯಲ್ಲಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಮೂವರು ಮಹಿಳೆಯರು ಹಾಗೂ ಮೂವರು ಪುರುಷರು ಭಾಗಿಯಾಗಿದ್ದಾರೆ. ಮಕ್ಕಳು ನಾಪತ್ತೆಯಾಗಿದ್ದಾರೆಂದು ಕೇಸು ದಾಖಲಾದ ಬಳಿಕ ನಿಜಾಂಶ ಬೆಳಕಿಗೆ ಬಂದಿದೆ ಎಂದು ನಗರದ ಎಸ್ಪಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ. 

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳೆಲ್ಲರನ್ನು ಬಂಧಿಸಲಾಗಿದೆ. ಮಕ್ಕಳ ಮೃತದೆಹ ಇಲ್ಲಿಯವರೆಗೆ ಪತ್ತೆಯಾಗದ ಹಿನ್ನೆಲೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments