ನವದೆಹಲಿ : ಭಾರತ ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ್ದು, ಎಲ್ಲೆಡೆ ರಾಷ್ಟ್ರಧ್ವಜವನ್ನು ಹಾರಿಸಿ ಸಂಭ್ರಮಿಸಲಾಗುತ್ತಿದೆ.
ಈ ಕ್ಷಣಕ್ಕೆ ಇನ್ನೂ ಹೆಚ್ಚಿನ ವಿಶೇಷತೆ ನೀಡಲು ಭೂಮಿಯಿಂದ ಸುಮಾರು 30 ಕಿ.ಮೀ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿದೆ.
ಸ್ಪೇಸ್ ಕಿಡ್ಜ್ ಇಂಡಿಯಾವು ಭೂಮಿಯಿಂದ ಸುಮಾರು 30 ಕಿ.ಮೀ ಎತ್ತರದಲ್ಲಿ ಭಾರತದ ಧ್ವಜವನ್ನು ಹಾರಿಸಿದೆ. ಧ್ವಜವನ್ನು ಭೂಮಿಯಿಂದ ಸುಮಾರು 1,06,000 ಅಡಿ ಎತ್ತರಕ್ಕೆ ಬಲೂನ್ನಲ್ಲಿ ಕಳುಹಿಸಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಹಾಗೂ ಐತಿಹಾಸಿಕ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಹರ್ ಘರ್ ತಿರಂಗ ಅಭಿಯಾನದ ಭಾಗವಾಗಿ ಸ್ಪೇಸ್ ಕಿಡ್ಜ್ ಇಂಡಿಯಾ ಬಾನಿನಲ್ಲಿ ಬಾವುಟವನ್ನು ಹಾರಿಸಿದೆ.