ಜೈಪುರ : ರಾಜಸ್ಥಾನದ ನೂತನ ಕಾಂಗ್ರೆಸ್ ಸರ್ಕಾರ  ಚುನಾವಣೆ ಪ್ರಚಾರದ ವೇಳೆ ನೀಡಿದ ಭರವಸೆಯನ್ನು ಈಡೇರಿಸುವುದರ ಮೂಲಕ ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
									
			
			 
 			
 
 			
					
			        							
								
																	
ಪಂಚ ರಾಜ್ಯಗಳ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಚುನಾವಣೆ ಗೆಲುವಿನ ಬಳಿಕ ಮಧ್ಯಪ್ರದೇಶ ಹಾಗೂ ಛತ್ತೀಸ್ ಗಢದ ಕಾಂಗ್ರೆಸ್ ಸರ್ಕಾರಗಳು ಸಾಲಮನ್ನಾ ಘೋಷಿಸಿದ್ದವು.
									
										
								
																	
ಇದೀಗ ರಾಜಸ್ಥಾನದಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆಯಂತೆ 2 ಲಕ್ಷದೊಳಗಿನ ರೈತರ ಸಾಲಮನ್ನಾ ಮಾಡಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು 18 ಸಾವಿರ ಕೋಟಿ ರೂ. ಹೊರೆ ಬೀಳಲಿದೆ. 
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.