Select Your Language

Notifications

webdunia
webdunia
webdunia
webdunia

ಮುಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ಮುಂದಿನ ಕಾಂಗ್ರೆಸ್ ಅಧ್ಯಕ್ಷ  ರಾಹುಲ್ ಗಾಂಧಿ
ಚೆನ್ನೈ , ಮಂಗಳವಾರ, 20 ಸೆಪ್ಟಂಬರ್ 2022 (09:26 IST)
ಚೆನ್ನೈ : ರಾಜಸ್ಥಾನ, ಛತ್ತಿಸ್ಗಢದ ನಂತರ ತಮಿಳುನಾಡು ಮತ್ತು ಬಿಹಾರದ ಕಾಂಗ್ರೆಸ್ ಘಟಕಗಳು ರಾಹುಲ್ ಗಾಂಧಿ ಅವರೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ನಿರ್ಣಯ ತೆಗೆದುಕೊಂಡಿವೆ.

ಸೆಪ್ಟೆಂಬರ್ 22ರಂದು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಇಂದು ನಡೆದ ಟಿಎನ್ಸಿಸಿ (ತಮಿಳುನಾಡು ರಾಜ್ಯ ಕಾಂಗ್ರೆಸ್ ಸಮಿತಿ) ನಡೆದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. 

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 8ರ ವರೆಗೂ ನಾಮಪತ್ರ ಹಿಂಪಡೆಯಲು ಅವಕಾಶವಿರಲಿದೆ. ಅ.17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದ್ದು ಅ.19 ರಂದು ಮತ ಎಣಿಕೆ ನಡೆಯಲಿದೆ. 

ಇಂದು ನಡೆದ ರಾಜ್ಯ ಕಾಂಗ್ರೆಸ್ ಪ್ರತಿನಿಧಿಗಳ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಹಾಗೂ ಎಐಸಿಸಿ ಅಧ್ಯಕ್ಷರು ಎಐಸಿಸಿ ಪ್ರತಿನಿಧಿ, ಪಿಸಿಸಿ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ರಚಿಸಲು ಅಧಿಕಾರ ಹೊಂದಿರುತ್ತಾರೆ ಎಂದು ಛತ್ತಿಸ್ಗಢ ಘಟಕ ನಿರ್ಣಯ ತೆಗೆದುಕೊಂಡ ಬಳಿಕ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯ ಕಿರುಕುಳಕ್ಕೆ ಹೆದರುವವನು ನಾನಲ್ಲ : ಶಿವಕುಮಾರ್