Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ
ನವದೆಹಲಿ , ಶನಿವಾರ, 18 ಸೆಪ್ಟಂಬರ್ 2021 (11:00 IST)
ನವದೆಹಲಿ :  ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 35,662 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 33,415,889 ಕ್ಕೆ ಏರಿಕೆಯಾಗಿದೆ. ಆ ಪೈಕಿ 444,563 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 3,26,32,222 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,40,639 ಸಕ್ರಿಯ ಪ್ರಕರಣಗಳಿವೆ.
ಕೇರಳದಲ್ಲಿ 1,86,754, ಮಹಾರಾಷ್ಟ್ರದಲ್ಲಿ 52,893, ತಮಿಳುನಾಡಿನಲ್ಲಿ 16,756, ಕರ್ನಾಟಕದಲ್ಲಿ 16,202, ಆಂಧ್ರಪ್ರದೇಶಲ್ಲಿ 14,708 ಸಕ್ರಿಯ ಪ್ರಕರಣಗಳಿವೆ. ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇದರಿಂದಾಗಿ ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದಿಂದ ` SC-ST' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್