ರೈತರ ಪ್ರತಿಭಟನೆ ಅಂತ್ಯ ಆಗುತ್ತಾ?

Webdunia
ಗುರುವಾರ, 9 ಡಿಸೆಂಬರ್ 2021 (15:43 IST)
ಕಳೆದೊಂದು ವರ್ಷದಿಂದ ದೆಹಲಿಯ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ಕೊನೆಗೊಳ್ಳುವ ಸಾಧ್ಯತೆ ಇದೆ.

ವಿವಾದಿತ ಮೂರು ಕೃಷಿ ಮಸೂದೆ ರದ್ಧಾದ ಬಳಿಕವೂ ತಮ್ಮ ಪ್ರತಿಭಟನೆ ಮುಂದುವರೆಸಿದ್ದ ರೈತ ಸಂಘಟನೆಗಳು  ಕನಿಷ್ಠ ಬೆಂಬಲ ಬೆಲೆ, ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರ ಮುಂದೆ ಇರಿಸಿದ್ದರು.
ಈ ಕುರಿತು ನಿನ್ನೆ ದೆಹಲಿಯಲ್ಲಿ ಸರ್ಕಾರದ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ತಮ್ಮ ಈ ವರ್ಷದ ಹೋರಾಟಕ್ಕೆ ಇಂದು ಅಂತಿಮ ಹಾಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರವು ರೈತರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಿದ ಹಿನ್ನಲೆ ಅವರು ಈ ತೀರ್ಮಾನ ನಡೆಸಿದ್ದು, ಈ ಬಗ್ಗೆ ಇಂದು ರೈತ ಸಂಘಟನೆ ನಿರ್ಧಾರ ಪ್ರಕಟಿಸಲಿದ್ದು, ನಾಳೆ ಪ್ರತಿಭಟನಾ ಸ್ಥಳಗಳನ್ನು ಬಿಟ್ಟು ಹೊರಡಲಿದ್ದಾರೆ.
ಕೃಷಿ ಕಾನೂನು ಹಿಂಪಡೆಯಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ನಂತರ ರೈತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿತು. ಜೊತೆಗೆ ಕೇಂದ್ರ ಸರ್ಕಾರ ಎಸ್ಕೆಎಂ ಅಥವಾ ಇತರೆ ಸಂಬಂಧಿತ ರೈತ ಸಂಘಗಳೊಂದಿಗೆ ಸಮಾಲೋಚಿಸಿದ ನಂತರವೇ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments